ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,134 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,98,118ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,813ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,98,118 ಮಂದಿ ಸೋಂಕಿತರ ಪೈಕಿ ಈವರೆಗೆ 4,41,60,279 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










