ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,249 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,33,31,645ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,903ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,33,31,6456 ಮಂದಿ ಸೋಂಕಿತರ ಪೈಕಿ ಈವರೆಗೆ 4,27,25,055 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










