ದೇಶದಲ್ಲಿ 12,286 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,11,24,527ಕ್ಕೆ ಏರಿಕೆ…

101
First Suddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,286 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,11,24,527ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 91 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,57,248ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,11,24,527 ಮಂದಿ ಸೋಂಕಿತರ ಪೈಕಿ ಈವರೆಗೆ 1,07,98,921 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.