ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,26,789 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,29,28,574ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 685 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,66,862ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,29,28,574 ಮಂದಿ ಸೋಂಕಿತರ ಪೈಕಿ ಈವರೆಗೆ 1,18,51,393 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










