ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,899 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,07,90,183ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 107 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,54,703ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,07,90,183ಮಂದಿ ಸೋಂಕಿತರ ಪೈಕಿ ಈವರೆಗೆ 1,04,80,455ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










