ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,923 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,08,71,294ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 108 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,55,360ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,08,71,294 ಮಂದಿ ಸೋಂಕಿತರ ಪೈಕಿ ಈವರೆಗೆ 1,05,73,372 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










