ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,091 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,44,01,670ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 340 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,62,189ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,44,01,670 ಮಂದಿ ಸೋಂಕಿತರ ಪೈಕಿ ಈವರೆಗೆ 3,38,00,925 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










