ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,31,968 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,30,60,542ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 780 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,67,642ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,30,60,542 ಮಂದಿ ಸೋಂಕಿತರ ಪೈಕಿ ಈವರೆಗೆ 1,19,13,292 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










