ದೇಶದಲ್ಲಿ 13,203 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,06,67,736 ಕ್ಕೆ ಏರಿಕೆ…

128
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,203 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,06,67,736 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 131 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,53,470ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,06,67,736 ಮಂದಿ ಸೋಂಕಿತರ ಪೈಕಿ ಈವರೆಗೆ 1,03,30,084ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.