ದೇಶದಲ್ಲಿ 1,32,788 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆ…

74
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,32,788 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,207 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,35,102 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,83,07,832 ಮಂದಿ ಸೋಂಕಿತರ ಪೈಕಿ ಈವರೆಗೆ 2,61,79,085 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.