ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,451 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,15,653ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 585 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,55,653ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,42,15,653 ಮಂದಿ ಸೋಂಕಿತರ ಪೈಕಿ ಈವರೆಗೆ 3,35,97,339 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










