ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,993 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,09,77,387ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 101 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,56,212ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,09,77,387 ಮಂದಿ ಸೋಂಕಿತರ ಪೈಕಿ ಈವರೆಗೆ 1,06,78,048 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










