ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,306 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,41,89,774ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 443 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,54,712ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,41,89,774 ಮಂದಿ ಸೋಂಕಿತರ ಪೈಕಿ ಈವರೆಗೆ 3,35,67,367 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










