ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,348 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,42,46,157ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 805 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,57,191ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,42,46,157 ಮಂದಿ ಸೋಂಕಿತರ ಪೈಕಿ ಈವರೆಗೆ 3,36,27,632 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










