ದೇಶದಲ್ಲಿ 14,989 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,11,39,516ಕ್ಕೆ ಏರಿಕೆ…

120
Firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,989 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,11,39,516ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 98 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,57,346ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,11,39,516 ಮಂದಿ ಸೋಂಕಿತರ ಪೈಕಿ ಈವರೆಗೆ 1,08,12,044 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.