ದೇಶದಲ್ಲಿ 15,968 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,04,95,147ಕ್ಕೆ ಏರಿಕೆ…

117
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,968 ಮಂದಿಗೆ ಕೊರೊನ ಸೋಂಕು ತಗುಲಿರುವುದು ದೃಢವಾಗಿದ್ದು, ಸೋಂಕಿತರ ಸಂಖ್ಯೆ 1,04, 95, 147ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 202 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,51,529ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,04,95,147 ಮಂದಿ ಸೋಂಕಿತರ ಪೈಕಿ 1,01,29,111 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,14,507 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.