ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,738 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,10,46,914ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 138 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,56,705ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,10,46,914 ಮಂದಿ ಸೋಂಕಿತರ ಪೈಕಿ ಈವರೆಗೆ 1,07,38,501 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










