ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,764 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,48,38,804ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 220 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,81,080ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,48,38,804 ಮಂದಿ ಸೋಂಕಿತರ ಪೈಕಿ ಈವರೆಗೆ 3,42,66,363 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










