ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,79,723 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,57,07,727ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 146 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,83,936ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,57,07,727 ಮಂದಿ ಸೋಂಕಿತರ ಪೈಕಿ ಈವರೆಗೆ 3,45,00,172 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










