ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,84,372 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,38,73,825ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,027 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,72,085ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,38,73,825 ಮಂದಿ ಸೋಂಕಿತರ ಪೈಕಿ ಈವರೆಗೆ 1,23,36,036 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










