ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,94,720 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,60,70,510ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 442 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,84,655ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,60,70,510 ಮಂದಿ ಸೋಂಕಿತರ ಪೈಕಿ ಈವರೆಗೆ 3,46,30,536 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










