ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದೇಶದಲ್ಲಿ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1383 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,111ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 50 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 645ಕ್ಕೆ ಏರಿಕೆಯಾಗಿದೆ. ಅಲ್ಲದೇ ದೇಶದಲ್ಲಿ ಈವರೆಗೆ 3975 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










