ದೇಶದಲ್ಲಿ 200ಕ್ಕೆ ತಲುಪಿದ ಓಮಿಕ್ರಾನ್ ಪ್ರಕರಣ ಸಂಖ್ಯೆ – ಕರ್ನಾಟಕದಲ್ಲಿ 19 ಮಂದಿಗೆ ಸೋಂಕು…

44
firstsuddi

ನವದೆಹಲಿ : ದೇಶದಲ್ಲಿ ನಿಧಾನವಾಗಿ ಓಮಿಕ್ರಾನ್ ಪ್ರಕರಣ ಪಸರಿಸುತ್ತಿದೆ. ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 200ಕ್ಕೆ ಏರಿಕೆಯಾಗಿದ್ದು, 77 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಓಮಿಕ್ರಾನ್ ಸೋಂಕು ಹರಡುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ 19 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಪತ್ತೆಯಾದ ಸೋಂಕಿತರ ಪೈಕಿ ಈಗಾಗಲೇ 15 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದೆ.

ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ದೇಶದ ವಿವಿಧೆಡೆ ಓಮಿಕ್ರಾನ್ ಪ್ರಕರಣಗಳು ಕಂಡುಬಂದಿವೆ. ಮಹಾರಾಷ್ಟ್ರದಲ್ಲಿ (54), ದೆಹಲಿ (54), ರಾಜಸ್ಥಾನ (18), ಕರ್ನಾಟಕ (19), ತೆಲಂಗಾಣ (20), ಗುಜರಾತ್ (14), ಕೇರಳ (15), ಆಂಧ್ರಪ್ರದೇಶ (1), ಚಂಡೀಗಢ (1), ತಮಿಳುನಾಡು (1) ಮತ್ತು ಪಶ್ಚಿಮ ಬಂಗಾಳ(1), ಉತ್ತರ ಪ್ರದೇಶದಲ್ಲಿ (2), ಸೋಂಕು ಕಾಣಿಸಿಕೊಂಡಿದ್ದು ಮತ್ತಷ್ಟು ರಾಜ್ಯಗಳಲ್ಲಿ ಸೋಂಕು ಕಾಣಿಸಿಕೊಳ್ಳುವ ಆತಂಕ ಎದುರಾಗಿದೆ.