ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,799 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,38,34,702ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 180 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,48,997ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,38,34,702 ಮಂದಿ ಸೋಂಕಿತರ ಪೈಕಿ ಈವರೆಗೆ 3,31,21,247 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










