ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,08,921 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,71,57,795ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,157 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,11,388 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,71,57,795 ಮಂದಿ ಸೋಂಕಿತರ ಪೈಕಿ ಈವರೆಗೆ 2,43,50,816 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










