ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,102 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,74,909ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,722 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,49,74,909 ಮಂದಿ ಸೋಂಕಿತರ ಪೈಕಿ ಈವರೆಗೆ 4,44,21,781 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










