ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,17,353 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,185 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,74,308ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,42,91,917 ಮಂದಿ ಸೋಂಕಿತರ ಪೈಕಿ ಈವರೆಗೆ 1,25,47,866 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










