ದೇಶದಲ್ಲಿ 2,22,315 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,67,52,447ಕ್ಕೆ ಏರಿಕೆ…

141
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,22,315 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,67,52,447ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,454 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,03,720 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,67,52,447 ಮಂದಿ ಸೋಂಕಿತರ ಪೈಕಿ ಈವರೆಗೆ 2,37,28,011 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.