ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 226 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,78,424ಕ್ಕೆ ಏರಿಕೆಯಾಗಿದೆ. ನಿನ್ನೆ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,702ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,78,424 ಮಂದಿ ಸೋಂಕಿತರ ಪೈಕಿ ಈವರೆಗೆ 4,41,44,029 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










