ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,483 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,62,569ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,399 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,23,622ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,30,62,569 ಮಂದಿ ಸೋಂಕಿತರ ಪೈಕಿ ಈವರೆಗೆ 4,25,23,311 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










