ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,528 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,04,005ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 149 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,16,281ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,30,04,005 ಮಂದಿ ಸೋಂಕಿತರ ಪೈಕಿ ಈವರೆಗೆ 4,24,58,543 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










