ದೇಶದಲ್ಲಿ 25,404 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,32,89,579ಕ್ಕೆ ಏರಿಕೆ…

70
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,404 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,32,89,579ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 339 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,43,213ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,32,89,579 ಮಂದಿ ಸೋಂಕಿತರ ಪೈಕಿ ಈವರೆಗೆ 3,24,84,159 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.