ದೇಶದಲ್ಲಿ 2,55,874 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,97,99,202ಕ್ಕೆ ಏರಿಕೆ…

80
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,55,874 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,97,99,202ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 614 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,90,462ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,97,99,202 ಮಂದಿ ಸೋಂಕಿತರ ಪೈಕಿ ಈವರೆಗೆ 3,70,71,898 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.