ದೇಶದಲ್ಲಿ 2,67,334 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆ…

176
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,67,334 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,529 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,83,248ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,54,96,330 ಮಂದಿ ಸೋಂಕಿತರ ಪೈಕಿ ಈವರೆಗೆ 2,19,86,363 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.