ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,685 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,50,215ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 33 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,572ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,31,50,215 ಮಂದಿ ಸೋಂಕಿತರ ಪೈಕಿ ಈವರೆಗೆ 4,26,09,335 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










