ದೇಶದಲ್ಲಿ 27,409 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,26,92,943ಕ್ಕೆ ಏರಿಕೆ…

58
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,409 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,26,92,943ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 347 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,09,358ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,26,92,943 ಮಂದಿ ಸೋಂಕಿತರ ಪೈಕಿ ಈವರೆಗೆ 4,17,60,458 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.