ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,204 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,19,98,158ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 373 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,28,682ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,19,98,158 ಮಂದಿ ಸೋಂಕಿತರ ಪೈಕಿ ಈವರೆಗೆ 3,11,80,968 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










