ದೇಶದಲ್ಲಿ 30,093 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,11,74,322ಕ್ಕೆ ಏರಿಕೆ…

147
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,093 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,11,74,322ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 374 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,14,482ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,11,74,322 ಮಂದಿ ಸೋಂಕಿತರ ಪೈಕಿ ಈವರೆಗೆ 3,03,53,710 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.