ದೇಶದಲ್ಲಿ 3036 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,29,284 ಕ್ಕೆ ಏರಿಕೆ…

64
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3036 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,29,284 ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,901 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,47,29,284 ಮಂದಿ ಸೋಂಕಿತರ ಪೈಕಿ ಈವರೆಗೆ 4,41,77,204 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.