ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,570 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,33,47,325ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 431 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,43,928ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,33,47,325 ಮಂದಿ ಸೋಂಕಿತರ ಪೈಕಿ ಈವರೆಗೆ 3,25,60,474 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










