ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,17,532 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,82,18,773ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 491 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,87,693ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,82,18,773 ಮಂದಿ ಸೋಂಕಿತರ ಪೈಕಿ ಈವರೆಗೆ 3,58,07,029 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










