ದೇಶದಲ್ಲಿ 3,29,942 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,29,92,517ಕ್ಕೆ ಏರಿಕೆ…

89
First Suddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,29,942 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,29,92,517ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,876 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,49,992ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,29,92,517 ಮಂದಿ ಸೋಂಕಿತರ ಪೈಕಿ ಈವರೆಗೆ 1,90,27,304 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.