ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,32,730 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,62,63,695ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,263 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,86,920ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,62,63,695 ಮಂದಿ ಸೋಂಕಿತರ ಪೈಕಿ ಈವರೆಗೆ 1,36,48,159 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










