ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 33,750 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,49,22,882ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 123 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,81,893ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,49,22,882 ಮಂದಿ ಸೋಂಕಿತರ ಪೈಕಿ ಈವರೆಗೆ 3,42,95,407 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










