ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,37,704 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,89,03,731ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 488 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,88,884ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,89,03,731 ಮಂದಿ ಸೋಂಕಿತರ ಪೈಕಿ ಈವರೆಗೆ 3,63,01,482 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










