ದೇಶದಲ್ಲಿ 3,43,144 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,40,46,809ಕ್ಕೆ ಏರಿಕೆ…

100
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,000 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,62,317ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,40,46,809 ಮಂದಿ ಸೋಂಕಿತರ ಪೈಕಿ ಈವರೆಗೆ 2,00,79,599 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.