ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 35,871 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,14,74,605ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 172 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,59,216ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,14,74,605 ಮಂದಿ ಸೋಂಕಿತರ ಪೈಕಿ ಈವರೆಗೆ 1,10,63,025 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










