ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,60,960 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,293 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,01,187ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,79,97,267 ಮಂದಿ ಸೋಂಕಿತರ ಪೈಕಿ ಈವರೆಗೆ 1,48,17,371 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










