ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,611 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,64,289 ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 36 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,642 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,49,64,289 ಮಂದಿ ಸೋಂಕಿತರ ಪೈಕಿ ಈವರೆಗೆ 4,43,99,415 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










