ದೇಶದಲ್ಲಿ 3,62,727 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,37,03,665ಕ್ಕೆ ಏರಿಕೆ…

108
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,62,727 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,37,03,665ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,120 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,58,317ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,37,03,665 ಮಂದಿ ಸೋಂಕಿತರ ಪೈಕಿ ಈವರೆಗೆ 1,97,34,823 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.